






ಗುರುವಾಯನಕೆರೆ: ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮತ್ತು ಬಳಂಜ ವಲಯದ ಒಕ್ಕೂಟದ ಪದಾಧಿಕಾರಿ ತರಬೇತಿ ಕಾರ್ಯಗಾರ ಕುವೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಂಕಕಾರಂದೂರು ಬಿ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಅವರು ವಹಿಸಿದರು. ಕಾರ್ಯಕ್ರಮವನ್ನು ಗುರುವಾಯನಕೆರೆ ಒಕ್ಕೂಟದ ಅಧ್ಯಕ್ಷ ಮಹೇಶ್ ದೀಪ ಬೆಳಗಿಸಿ ಉದ್ಘಾಟಿಸಿದರು.


ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಒಕ್ಕೂಟದ ಮಹತ್ವ, ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ, ಒಕ್ಕೂಟದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ, ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ ಒದಗಿಸಿಕೊಡುವ ಬಗ್ಗೆ, ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.

ಉತ್ತಮ ಒಕ್ಕೂಟವನ್ನು ಗುರುತಿಸಲಾಯಿತು. ಮತ್ತು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗುರುವಾಯನಕೆರೆ ಹಾಗೂ ಬಳೆಂಜ ವಲಯದ ಸೇವಾ ಪ್ರತಿನಿಧಿಯವರು ಉಪಸ್ಥಿತರಿದ್ದರು. ಗುರುವಾಯನಕೆರೆ ವಲಯದ ಮೇಲ್ವಿಚಾರಕಿ ಯಶೋದ ಅವರು ಸ್ವಾಗತಿಸಿದರು. ಬಳೆಂಜ ವಲಯದ ಮೇಲ್ವಿಚಾರಕಿ ಪದ್ಮಾವತಿಯವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಮಾಡಿದರು.









