ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಮಠದಲ್ಲಿ 10ನೇ ವರ್ಷದ ಶನೇಶ್ವರ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ: ಲಾಯಿಲ ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಸಮಿತಿಯಿಂದ ಫೆ. 7ರಂದು ನಡೆಯುವ ಹತ್ತನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಘವೇಂದ್ರ ಮಠದಲ್ಲಿ ಕ್ಷೇತ್ರದ ಮಹಾಪೋಷಕ ನಾರಾಯಣ ಬೇಗೂರು ರವರ ಅಮೃತ ಹಸ್ತದಿಂದ ಜ. 3ರಂದು ಬಿಡುಗಡೆಗೊಳಿಸಲಾಯಿತು.

ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಕ್ಷೇತ್ರದ ಆಡಳಿತ ಸಮಿತಿಯ ಟ್ರಸ್ಟಿಗಳಾದ ಸೋಮೇಗೌಡ, ಕೃಷ್ಣಪ್ಪ ಪೂಜಾರಿ, ವಿಠಲ ಶೆಟ್ಟಿ, ವಾರಿಜ ಸುವರ್ಣ, ಸಂಗೀತ ಹೆರಾಜೆ ಹಾಗೂ ಇತರ ಗಣ್ಯರು ಹಾಜರಿದ್ದರು. ಸುರೇಶ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here