ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

0

ಬೆಳ್ತಂಗಡಿ: ಮಂಡಲ ಭಾರತೀಯ ಜನತಾ ಪಾರ್ಟಿ ವಿಶೇಷ ಕಾರ್ಯಕಾರಿಣಿ ಸಭೆ ಜ‌. 5ರಂದು ಜೈನ್ ಪೇಟೆ ಕಿನ್ಮಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ , ಜಿಲ್ಲಾ ಕಾರ್ಯದರ್ಶಿಗಳಾದ ಪ್ರೇಮನಾಥ್, ಸೀತಾರಾಮ ಬೆಳಾಲು ಹಾಗೂ ವಸಂತಿ ಮಚ್ಚಿನ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕರ್ತರು ಭಾಗವಹಿಸಿದ್ದರು.

ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಲಾಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಇತ್ತೀಚೆಗೆ ಅಗಲಿದ ವಿನಯ್ ಹೆಗ್ಡೆ ಹಾಗೂ ಮಂಜಪ್ಪ ದೇವಾಡಿಗರ ವ್ಯಕ್ತಿತ್ವದ ಬಗ್ಗೆ ತಿಳಿಸಿ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ನಿವೃತ್ತ ಸರ್ಕಾರಿ ಉದ್ಯೋಗಿಗಳಾದ ಪ್ರಸನ್ನ ಕುಮಾರ್ ಹಾಗೂ ಪದ್ಮ ಕುಮಾರ್ ಅವರನ್ನು ಪಕ್ಷದ ಧ್ವಜ ನೀಡಿ ಸೇರ್ಪಡೆಗೊಳಿಸಲಾಯಿತು. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ನಾವೂರು ವಂದೇ ಮಾತರಂ ಗೀತೆ ಹಾಡಿದರು. ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ, ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ನಿರೂಪಿಸಿದರು.

LEAVE A REPLY

Please enter your comment!
Please enter your name here