ಜ.13: ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

0

ಬೆಳ್ತಂಗಡಿ: ತಾಲೂಕು ಪಂಚಾಯತ್ ಒಂದನೇ ಮಹಡಿಯಲ್ಲಿ ಜ.13ರಂದು ಬೆಳಿಗ್ಗೆ 10ರಿಂದ ಸಂಜೆ 4ಗಂಟೆಯವರೆಗೆ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಐಟಿ ಮತ್ತು ಜಿ.ಎಸ್.ಟಿ ಹೊರತುಪಡಿಸಿ, ಅರ್ಜಿ ಸಲ್ಲಿಸಿ 5 ತಿಂಗಳು ಕಳೆದು ಗೃಹಲಕ್ಷ್ಮಿ ಯೋಜನೆಯ ಹಣವು ವೈಯುಕ್ತಿಕ ಖಾತೆಗೆ ಜಮೆಯಾಗದ ಫಲಾನುಭವಿಗಳು ಭಾಗವಹಿಸಬಹುದು.

ಫಲಾನುಭವಿಗಳು ಅರ್ಜಿ ಸಲ್ಲಿಸಿದ ದಾಖಲೆ ಪ್ರತಿ, ಪಡಿತರ ಚೀಟಿ ತರುವುದು. ಅಲ್ಲದೇ, ಈವರೆಗೆ ಅರ್ಜಿ ಸಲ್ಲಿಸದಿರುವ ತಾಲೂಕಿನ ಅರ್ಹ ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಪಡಿತರ ಚೀಟಿ ತಿದ್ದುಪಡಿ ಮಾಡಿಕೊಂಡ ಅರ್ಹ ಗೃಹಿಣಿಯರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಆಧಾರ್ ಪ್ರತಿ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ತರುವಂತೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here