








ಅಂಡಿಂಜೆ: ಶಾಂತಿವನ ಟ್ರಸ್ಟ್ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಜ.2ರಂದು ಧರ್ಮಸ್ಥಳದಲ್ಲಿ ನಡೆದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 8ನೇ ತರಗತಿಯ ಪ್ರಜ್ಞಾ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ತಾಲೂಕಿನ, ಊರಿನ ಹಾಗೂ ಶಾಲೆಯ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ. ಅವರು ಅಂಡಿಂಜೆ ಗ್ರಾಮದ ಪ್ರಭಾಕರ ಹಾಗೂ ಜಲಜ ದಂಪತಿಗಳ ಪುತ್ರಿ. ಅವರಿಗೆ ಶಾಲಾ ಎಸ್. ಡಿ.ಎಮ್. ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕವೃಂದ, ವಿದ್ಯಾರ್ಥಿ ವೃಂದ ಹಾಗೂ ಹಿರಿಯ ವಿದ್ಯಾರ್ಥಿಸಂಘದ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದ್ದಾರೆ.









