






ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಸಹಕಾರದೊಂದಿಗೆ ಘಟಕದ
ದಶಸಂಭ್ರಮದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಬಿಲ್ಲವ ಸಮಾಜ ಬಾಂಧವರಿಗಾಗಿ 8 ತಂಡಗಳ ಬಿಡ್ಡಿಂಗ್ ಮಾದರಿಯ ಆಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಫಿ 2026 ಹಾಗೂ ಮಹಿಳೆಯರಿಗೆ ಮತ್ತು ಪುರುಷರಿಗೆ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಜ. 4ರಂದು ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ. ಪ್ರಸಾದ್, ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮೋಕ್ತೆಸರ ಯೋಗೀಶ್ ಪೂಜಾರಿ ಕಡ್ತಿಲ, ಯುವವಾಹಿನಿ ಕೇಂದ್ರ ಸಮಿತಿಯ ಅರೋಗ್ಯ ನಿರ್ದೇಶಕ ರಾಕೇಶ್ ಕುಮಾರ್ ಮೂಡುಕೋಡಿ, ಯುವ ವಾಹಿನಿ ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ಡೊಂಕಬೆಟ್ಟು, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಾ ನವೀನ್, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ನಿರ್ದೇಶಕ ಚಂದ್ರ ಶೇಖರ ಇಂದಬೆಟ್ಟು, ಬೆಳ್ತಂಗಡಿ ಧ್ವನಿ ನ್ಯೂಸ್ ಸುದೀಪ್ ಸಾಲಿಯಾನ್, ಯುವ ವಾಹಿನಿ ಮಹಿಳಾ ಸಂಚಾಲನಾ ಸಮಿತಿಯ ಪ್ರಧಾನ ಸಂಚಾಲಕಿ ಲೀಲಾವತಿ ಪಣಕಜೆ, ಯುವವಾಹಿನಿ ಘಟಕದ ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಅದೇಲು, ಉಪಾಧ್ಯಕ್ಷ ಸಂತೋಷ್ ಅರಳಿ, ಕ್ರೀಡಾ ನಿರ್ದೇಶಕ ಬಿ. ಹರೀಶ್ ಕುಮಾರ್ ಕಳಿಯ ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನ ವಿತರಿಸಿದರು.


ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದು ಸಹಕರಿಸಿದರು. ಕ್ರಿಕೆಟ್ ಪಂದ್ಯಾಟದಲ್ಲಿ ಅಶ್ವಥ್ ಕುಮಾರ್ ಮಾಲಕತ್ವದ ಬೆಳ್ತಂಗಡಿ ಯಮಃ ಜಯಶ್ರೀ ಮೋಟಾರ್ಸ್ ಪ್ರಥಮ, ಪ್ರದೀಪ್ ಪೂಜಾರಿ ಮಾಲಕತ್ವದ ಅಯಾನ್ ಪೂಜಾರಿ ಕಾಶಿಪಟ್ಣ ತಂಡ ದ್ವಿತೀಯ ಬಹುಮಾನ ಪಡೆದುಕೊಂಡಿತು.
ಬೆಳ್ತಂಗಡಿ ಘಟಕದ ಕಾರ್ಯದರ್ಶಿ ಮಧುರ ರಾಘವ ಸ್ವಾಗತಿಸಿ, ಆಕಾಶ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.









