






ಬೆಳ್ತಂಗಡಿ: ತಾಲೂಕು ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಳೆಕೋಟೆ ವಾಣಿ ಕಾಲೇಜು ಸಮೀಪ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ದಾಟುತ್ತಿರುವ ವೇಳೆ ಬೈಕ್ ಡಿಕ್ಕಿ ಹೊಡೆದ ಘಟನೆ ಜ. 6ರಂದು ನಡೆದಿದೆ.



ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದೆ. ದ್ವಿಚಕ್ರ ಸವಾರನಿಗೂ, ವಿದ್ಯಾರ್ಥಿನಿಗೂ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.









