ಅಂಡಿಂಜೆ: ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

0

ಅಂಡಿಂಜೆ: ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ ಜ. 6ರಂದು ಬೆಳಿಗ್ಗೆ ಗಂಟೆ 10-30ಕ್ಕೆ ಅಂಡಿಂಜೆ ಸರಿಯಾಗಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿವಿಧ ಶಾಲಾ ಮಕ್ಕಳಿಂದ ಶೈಕ್ಷಣಿಕ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಭೆಯಲ್ಲಿ ಗ್ರಾಮ ಪಂಚಾಯತು ಉಪಾಧ್ಯಕ್ಷೆ ಶ್ವೇತಾ, ಸದಸ್ಯರಾದ ಹರೀಶ್ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಅಂಡಿಂಜೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಮೇಶ, ಸದಸ್ಯರಾದ ವಿಜಯ ಬಂಗೇರ ಅಂಡಿಜೆ, ಶಾಲಾ ಮುಖ್ಯಾೋಪಾಧ್ಯಯಿನಿ ನಳಿನಿ, ಸರಕಾರಿ ಪ್ರೌಡ ಶಾಲಾ ಪ್ರಥಮ ದರ್ಜೆಯ ಸಹಾಯಕ ಪ್ರಕಾಶ್ ಬಿ. ಆರ್., ಸಾವ್ಯ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಶಿಕ್ಷಕ ಮಂಜುನಾಥ ಶೆಟ್ಟಿಗಾರ್ ನೆಲ್ಲಿಂಗೇರಿ, ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಅಕ್ಷತಾ ಅವರು ಉಪಸ್ಥಿತರಿದ್ದರು.

ಪಂಚಾಯತು ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿ ಶೀನ ಅವರು ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕ ಕವನ್ ಕುಮಾರ್, ಇತರ ಅಧ್ಯಾಪಕ ವೃಂದವರು, ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಪಂಚಾಯತ್ ಸದಸ್ಯರಾದ ಹರೀಶ್ ಹೆಗ್ಡೆ ವಂದಿಸಿದರು.

LEAVE A REPLY

Please enter your comment!
Please enter your name here