ಅಂಡಿಂಜೆ: ಹಾಲು ಉತ್ಪಾದಕರ ಸಂಘಕ್ಕೆ ಧರ್ಮಸ್ಥಳದಿಂದ ರೂ.2ಲಕ್ಷ ಅನುದಾನ ಹಸ್ತಾಂತರ

0

ಅಂಡಿಂಜೆ: ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆಯವರು 2ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಅಶೋಕ್ ಬಿ.ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮೋಹನ್ ಅಂಡಿಂಜೆ ಅವರಿಗೆ ಅನುದಾನವನ್ನು ವಿತರಣೆ ಮಾಡಿದರು. ವಲಯದ ಮೇಲ್ವಿಚಾರಕಿ ಶಾಲಿನಿ, ಸೇವಾ ಪ್ರತಿನಿಧಿ ಭಾಗ್ಯ, ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಪವಿತ್ರ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here