








ಗೇರುಕಟ್ಟೆ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಅರ್ಚಕರಾದ ಕಾರ್ತಿಕ್ ಹೆಗಡೆ, ಭಜನಾ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ ಗೌಡ ಅಣವು, ಕಣಿಯೂರು ವಲಯದ ಮೇಲ್ವಿಚಾರಕಿ ಶಿಲ್ಪಾ, ಸೇವಾಪ್ರತಿನಿಧಿ ಸೀತಾರಾಮ ಆಳ್ವ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.









