ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

0

ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ ಜ. 11ರಂದು ದೇಲೋಡಿ ವಾರಿಜಾ ಹೊನ್ನಪ್ಪ ಗೌಡರ ಮನೆಯಲ್ಲಿ ಜರುಗಿತು. ಈ ಕ್ರೀಡಾ ಕೂಟವನ್ನು ನಿವೃತ್ತ ಮುಖ್ಯ ಶಿಕ್ಷಕಿ ಜಾಹ್ನವಿ ಪೂರ್ಯಳ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕ ಹರೀಶ್ ಗೌಡ ಪರಪಾಜೆ ಭಾಗವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಿಜಯ ಕುಮಾರ್ ಎಂ. ವಹಿಸಿ ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು. ಸಂಘದ ಗೌರವಾಧ್ಯಕ್ಷ ನವೀನ್ ಗೌಡ ವಾದ್ಯಕೋಡಿ, ಎಲ್ಲರನ್ನೂ ಸ್ವಾಗತಿಸಿದರು. ಯುವ ವೇದಿಕೆ ಅಧ್ಯಕ್ಷರಾದ ಅಜಿತ್ ಬಜಿಲ, ಮಹಿಳಾ ವೇದಿಕೆ ಅಧ್ಯೆಕ್ಷೆ ವನಿತಾ ಕಡಮಾಜೆ, ದೇಲೋಡಿ ಮನೆಯ ಯಜಮಾನ ಹೊನ್ನಪ್ಪ ಗೌಡ, ಕೊಯ್ಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಯಾಮಣಿ, ಉಪಸ್ಥಿತರಿದ್ದರು. ಒಲುಮೆ ಅವರ ಪ್ರಾರ್ಥನೆಯ ಮೂಲಕ ಆರಂಭವಾದ ಕಾರ್ಯಕ್ರಮದಲ್ಲಿ ಭರತ್ ಡೆಂಬುಗ ಕಾರ್ಯಕ್ರಮ ನಿರೂಪಿಸಿದರು. ದಾಮೋದರ ಗೌಡ ವಂದಿಸಿದರು.

LEAVE A REPLY

Please enter your comment!
Please enter your name here