ಎಸ್‌.ಡಿ.ಎಂ. ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ: ಪ್ರಾಜೆಕ್ಟ್ ಎಕ್ಸಿಬಿಷನ್-100 ಕ್ಕೂ ಹೆಚ್ಚು ಪ್ರಾಜೆಕ್ಟ್ ಗಳ ಪ್ರದರ್ಶನ-ಅತ್ಯುತ್ತಮ ಪ್ರಾಜೆಕ್ಟ್ ಗೆ ನಗದು ಬಹುಮಾನ

0

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಮತ್ತು ನವೋದ್ಯಮ ಹಾಗು ಉದ್ಯಮಶೀಲತೆ ಅಭಿವೃದ್ಧಿ ಘಟಕ (IEDC), ಸಂಸ್ಥೆಯ ನವೀನತಾ ಪರಿಷತ್ ಮತ್ತು ಬೆಂಗಳೂರು ವಿಭಾಗದ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್ ಸಹಯೋಗದಲ್ಲಿ ಬೃಹತ್ ಪ್ರಾಜೆಕ್ಟ್ ಎಕ್ಸಿಬಿಷನ್ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ನಡೆಯಿತು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಮಾರ್ಗದರ್ಶನದಲ್ಲಿ ನಡೆದ ವಿಜ್ಞಾನ ಮತ್ತು ತಂತ್ರಜ್ಞಾನ ಮಾದರಿಯ ಯೋಜನೆಗಳ ಪ್ರದರ್ಶನಕ್ಕೆ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್ ಟಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

 ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಇನ್ಫರ್ಮೇಶನ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಹಾಗು ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ವಿವಿಧ ರೀತಿಯ ಪ್ರಾಜೆಕ್ಟ್ ಗಳನ್ನು ಪ್ರದರ್ಶನ ಮಾಡಿದರು. ಪ್ರದರ್ಶನದಲ್ಲಿ ಒಟ್ಟು ವಿದ್ಯಾರ್ಥಿಗಳು ತಯಾರಿಸಿದ 112 ಪ್ರಾಜೆಕ್ಟ್ ಗಳನ್ನು ಪ್ರದರ್ಶನಕ್ಕಿಡಲಾಯಿತು. ವಿಜ್ಞಾನ ಮತ್ತು ತಂತ್ರಜ್ಞಾನ ಮಾದರಿಯಲ್ಲಿ ಅತ್ಯುತ್ತಮವಾಗಿ ತಯಾರಿಸಿದ ಪ್ರಾಜೆಕ್ಟ್ ಗೆ ನಗದು ಪುರಸ್ಕಾರದೊಂದಿಗೆ ಆಕರ್ಷಣೀಯ ಬಹುಮಾನ ನೀಡಿ ಅಭಿನಂದಿಸಲಾಯಿತು. 500 ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವಿಭಾಗಗಳ ಉಪನ್ಯಾಸಕರು ಭಾಗಿಯಾಗಿದ್ದರು. ಡಾ. ಪ್ರತಾಪಚಂದ್ರ, ಡಾ. ಭರತ್‌ರಾಜ್ ಕುಮಾರ್, ಡಾ. ಸುಬ್ರಹ್ಮಣ್ಯ ಭಟ್, ಜಗದೀಶ ಎಂ, ಪ್ರದೀಪ್ ರಾವ್ ಕೆ.ಬಿ., ಪ್ರದೀಪ್ ಜಿ.ಎಸ್, ಡಾ. ವಿನಯ ಶ್ಯಾಮ್ , ಪದ್ಮಪ್ರಸಾದ್ ಕಾರ್ಯಕ್ರಮವನ್ನು ಸಂಯೋಜಿಸಿದರು.

ಡಿ. ಸುರೇಂದ್ರ ಕುಮಾರ್ ಮೆಚ್ಚುಗೆ: ಎಸ್‌ಡಿಎಂ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಲ್ಲಿ ನಡೆದ ವಿದ್ಯಾರ್ಥಿಗಳ ವಿಜ್ಞಾನ ಮತ್ತು ತಂತ್ರಜ್ಞಾನ ಮಾದರಿಯ ಯೋಜನಾ ಪ್ರದರ್ಶನ ಕಾರ್ಯಕ್ರಮಕ್ಕೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್ ಭೇಟಿ ನೀಡಿ, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಪ್ರತಿಭೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್, ಕಾಲೇಜಿನ ಪ್ರಬಂಧಕರಾದ ರಾಜವರ್ಮ ಸೇರಿದಂತೆ ಸಂಸ್ಥೆಯ ಇತರೆ ಪ್ರಮುಖರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here