ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸಂಕ್ರಾಂತಿ ಸಂಭ್ರಮ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

0

ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸಂಕ್ರಾಂತಿ ಸಂಭ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಧರ್ಮಸ್ಥಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಅವರು ಆಗಮಿಸಿ ಸಂಕ್ರಾಂತಿ ಹಬ್ಬದ ಮಹತ್ವ ಹಿನ್ನೆಲೆ, ವೈಜ್ಞಾನಿಕ ಕಾರಣ, ಹಾಗೂ ಹಬ್ಬಗಳು ಆಚರಿಸುವ ಉದ್ದೇಶವನ್ನು ಮಕ್ಕಳಿಗೆ ಸವಿವರವಾಗಿ ವಿವರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಹಾಗೂ ಶಾಲಾ ಸಂಚಾಲಕರಾದ ಅನಂತಪದ್ಮನಾಭ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸೂರ್ಯ ನಮಸ್ಕಾರ ನೃತ್ಯದೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಒಳಗೊಂಡಿದ್ದು, ಮಕ್ಕಳು ಸಾಂಪ್ರದಾಯಿಕ ಉಡುಗೆ ತೊಟ್ಟು, ಎಳ್ಳು ಬೆಲ್ಲ ಹಂಚಿ ತಿಂದು ಸಂಭ್ರಮಿಸಿದರು.

ಪ್ರಾಥಮಿಕ ಶಾಲಾ ಸಾಂಸ್ಕೃತಿಕ ಸಂಘದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ. ವಿ. ಅವರು ಸ್ವಾಗತಿಸಿದರು. ವೈದೇಹಿ ಹಾಗೂ ಮಾನ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಜಿಶಾಂತ್ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here