ಬೆಳ್ತಂಗಡಿ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಆಚರಣೆ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಹಬ್ಬದ ವಿಶೇಷ ಆಹಾರವಾದ ಎಳ್ಳು ಬೆಲ್ಲವನ್ನು ತಯಾರಿಸಿ ಎಲ್ಲರಿಗೂ ಹಂಚಲಾಯಿತು. ಸಾಂಪ್ರಾದಾಯಿಕ ಉಡುಗೆಗಳನ್ನು ಧರಿಸಿದ ಮಕ್ಕಳು ವಿಭಿನ್ನ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಸಂಕ್ರಾಂತಿ ಹಬ್ಬದ ವಿಶೇಷತೆಯನ್ನು ಸಾನ್ವಿ ಎಸ್. ಬಂಗೇರ 8ನೇ, ಶ್ರೇಯಸ್ 9ನೇ ತಮ್ಮ ಭಾಷಣದ ಮೂಲಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮಕರ ಸಂಕ್ರಾಂತಿ ಪ್ರಯುಕ್ತ ತಯಾರಿಸಿದ ಭಿತ್ತಿ ಪತ್ರಿಕೆಗಳನ್ನು ಪ್ರದರ್ಶಿಸಲಾಯಿತು.

ಶಾಲಾ ಶಿಕ್ಷಕಿಯವರಾದ ವಾಗ್ದೇವಿ, ಪ್ರಮೀಳಾ ಎನ್. ಕಾರ್ಯಕ್ರಮವನ್ನು ನಿರ್ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ. ಆರ್. ಸಲಹೆ, ಶಿಕ್ಷಕ ವೃಂದದವರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು.

LEAVE A REPLY

Please enter your comment!
Please enter your name here