ಮಾಜಿ ಶಾಸಕ ಕೆ. ವಸಂತ ಬಂಗೇರರ 80ನೇ ಹುಟ್ಟುಹಬ್ಬದ ಅಂಗವಾಗಿ ಬಂಗೇರ ಬಿಗ್ರೇಡ್ ಆಶ್ರಯದಲ್ಲಿ ಮದ್ದಡ್ಕದಲ್ಲಿ ಅಂತರ್ ಜಿಲ್ಲಾ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

0

ಬೆಳ್ತಂಗಡಿ: ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿ, ಐದು ದಶಕಗಳಿಂದ ರಾಜಕೀಯ ಜೀವನದಲ್ಲಿ ಜನ ಸೇವೆಯ ಮೂಲಕ ಸಮಗ್ರ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿ ಕೊಂಡ ಧೀಮಂತ ನಾಯಕ ಕೆ. ವಸಂತ ಬಂಗೇರರ 80ನೇ ಹುಟ್ಟುಹಬ್ಬದ ಅಂಗವಾಗಿ ಬಂಗೇರ ಬಿಗ್ರೇಡ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಹೊನಲು ಬೆಳಕಿನ 65ಕೆಜಿ ವಿಭಾಗದ ಪುರುಷರ ಅಂತರ್ ಜಿಲ್ಲಾ ಮಟ್ಟದ ಮತ್ತು ಪ್ರೌಢ ಶಾಲಾ ವಿಭಾಗದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದ ಉದ್ಘಾಟನೆ ಜ. 15ರಂದು ನಡೆಯಿತು.

ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಧರ್ಮದರ್ಶಿ ಹರೀಶ್ ಆರಿಕೋಡಿ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಗೇರ ಬಿಗ್ರೇಡ್ ಇದರ ಗೌರವಾಧ್ಯಕ್ಷೆ ಪ್ರೀತಿತಾ ಧರ್ಮವಿಜೇತ ವಹಿಸಿದ್ದರು. ದಿ.ಕೆ ವಸಂತ ಬಂಗೇರರವರ ಧರ್ಮಪತ್ನಿ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ. ಬಂಗೇರ ಕ್ರೀಡಾಂಗಣವನ್ನು ಉದ್ಘಾಟಿಸಿದರು. ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಭಟ್, ವಸಂತ ಬಂಗೇರರ ಅಳಿಯಂದಿರರಾದ ಧರ್ಮ ವಿಜೇತ್, ಸಂಜೀವ ಕಣೆಕಲ್, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ. ಕೆ. ಪ್ರಸಾದ್, ಆಮೇಚೂರ್ ಕಬಡ್ಡಿ ಅಸೋಸಿಯಷನ್ ಅಧ್ಯಕ್ಷ ರಂಜನ್ ಜಿ. ಗೌಡ, ಕಬಡ್ಡಿ ತೀರ್ಪುಗಾರ ಮಂಡಳಿಯ ಪ್ರಭಾಕರ ನಾರಾವಿ, ಬೆಳ್ತಂಗಡಿ ನ್ಯಾಯವಾದಿ ಕೇಶವ ಗೌಡ ಬೆಳಾಲು, ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜು ಪ್ರಾಂಶುಪಾಲೆ ಡಾ. ಸವಿತಾ, ಪ. ಪೂ. ಕಾಲೇಜು ಪ್ರಾಂಶುಪಾಲ ಸುಕೇಶ್ ಕುಮಾರ್, ಉಪ ಪ್ರಾಂಶುಪಾಲ ಶಮಿಯುಲ್ಲಾ, ವೃಷಭ ಅರಿಗ ಓಡಿಲು, ವಕೀಲ ಸುರೇಶ ಪೂಜಾರಿ, ಭಾಗವಸಿದ್ದರು.

ಬಂಗೇರ ಬಿಗ್ರೇಡ್ ಉಪಾಧ್ಯಕ್ಷ ಅನೂಪ್ ಎಂ. ಬಂಗೇರ, ಪ್ರಧಾನ ಕಾರ್ಯದರ್ಶಿ ಕೆ. ಸಲೀಂ ಗುರುವಾಯನಕೆರೆ, ಜತೆ ಕಾರ್ಯದರ್ಶಿ ರಾಕೇಶ್ ಮೂಡು ಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೋಶಾಧಿಕಾರಿ ರಾಜಶ್ರೀ ರಮಣ್ ಸ್ವಾಗತಿಸಿ, ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ನಿರೂಪಿಸಿದರು.

LEAVE A REPLY

Please enter your comment!
Please enter your name here