






ಬೆಳ್ತಂಗಡಿ: ಕೇಳ- ಕಾಶಿಪಟ್ಣ ಪಂಚಲಿಂಗೇಶ್ವರ ದೇವಸ್ಥಾನದ ರಾಜಗೋಪುರದ ಉದ್ಘಾಟನೆ ಹಾಗೂ ಸಭಾ ಭವನ ಮತ್ತು ಅನ್ನಛತ್ರ ಕಟ್ಟಡಗಳ ಶಿಲಾನ್ಯಾಸ ಸಮಾರಂಭ ಜ.21ರಂದು ನಡೆಯಲಿದೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ರಾಜಗೋಪುರ ಉದ್ಘಾಟನೆ ಮಾಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಸಭಾಭವನ ಶಿಲಾನ್ಯಾಸ ಮಾಡಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಕಟೀಲು ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀ ಅನಂತಪದ್ಮನಾಭ ಅಸ್ರಣ್ಣರು ಆಶೀರ್ವಚನ ನೀಡಲಿದ್ದಾರೆ.ಆಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ದೀಪ ಪ್ರಜ್ವಲನೆ ಮಾಡಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕ ಎಸ್. ಎಲ್. ಭೋಜೇ ಗೌಡ, ಐವನ್ ಡಿ’ಸೋಜಾ, ಕೆ. ಪ್ರತಾಪ್ ಸಿಂಹ ನಾಯಕ್ ನಾಯಕ್ ,ಮಂಜುನಾಥ ಭಂಡಾರಿ, ಧನಂಜಯ ಸರ್ಜಿ, ಕಿಶೋರ್ ಬಿ. ಆರ್, ಕೆ.ಪಿ.ಸಿ.ಸಿ ಪ್ರಧಾನ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ಕಾಶಿಪಟ್ಣ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಉಪಸ್ಥಿತರಿರಲಿದ್ದಾರೆ.









