








ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮಹಿಳೆಯರ ಅಸಹಜ ಸಾವು ಹಾಗೂ ನಾಪತ್ತೆ ಪ್ರಕರಣಗಳ ತನಿಖೆಯ ವರದಿಯನ್ನು ತಮಗೆ ಸಲ್ಲಿಸುವಂತೆ ವಿಶೇಷ ತನಿಖಾ ತಂಡದ ಮುಖ್ಯಸ್ಥರಿಗೆ ನಿರ್ದೇಶನ ನೀಡುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣಗಳ ಸಮಗ್ರ ತನಿಖೆಗೆ ಎಸ್‌ಐಟಿ ರಚಿಸುವಂತೆ ಕೋರಿ ೨೦೨೨ರ ಜು.೧೪ರಂದು ಆಯೋಗ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿತ್ತು. ಸರ್ಕಾರವು ಎಸ್‌ಐಟಿ ರಚಿಸಿತ್ತು. ಎಸ್‌ಐಟಿ ವ್ಯಾಪ್ತಿಯಲ್ಲಿ ದಾಖಲಾಗುವ ಎಲ್ಲ ಪ್ರಕರಣ ತನಿಖೆ ನಡೆಸಬೇಕು ಎಂದು ಸರ್ಕಾರ ಸೂಚಿಸಿದ್ದರೂ ಎಸ್‌ಐಟಿ ಸಾಕ್ಷಿ ದೂರುದಾರರ ಹೇಳಿಕೆ ಆಧರಿಸಿದ ತನಿಖೆಗಷ್ಟೇ ಸೀಮಿತವಾದಂತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.








