ಧರ್ಮಸ್ಥಳ ಸಂಸ್ಥೆಗಳ ಪರವಾಗಿ ಹಿಂದೆ ವಕೀಲರಾಗಿ ಕಾರ್ಯ ನಿರ್ವಹಿಸಿದ್ದ ಹಿನ್ನೆಲೆಮಹೇಶ್ ಶೆಟ್ಟಿ ಗಡೀಪಾರು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ತನ್ನನ್ನು ಗಡೀಪಾರು ಮಾಡಿ ಸರಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ಪ್ರಸಾದ್ ಹಿಂದೆ ಸರಿದಿದ್ದಾರೆ. ಧರ್ಮಸ್ಥಳದ ಸಂಸ್ಥೆಗಳ ಪರವಾಗಿ ಶ್ಯಾಮ್‌ಪ್ರಸಾದ್ ಅವರು ಈ ಹಿಂದೆ ವಕೀಲರಾಗಿ ಕಾರ್ಯ ನಿರ್ವಹಿಸಿರುವುದು ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಕಾನೂನು ಸುವ್ಯವಸ್ಥೆಯ ಕಾರಣಕ್ಕಾಗಿ ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿಯವರ ಕೋರಿಕೆ ಮೇರೆಗೆ ಪುತ್ತೂರು ಉಪವಿಭಾಗದ ದಂಡಾಧಿಕಾರಿಯೂ ಆಗಿರುವ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ತಮ್ಮನ್ನು ೨೦೨೫ರ ಡಿ.೧೬ರಿಂದ ೨೦೨೬ ಸೆ.೧೬ರವರೆಗೆ ಒಟ್ಟು ೯ ತಿಂಗಳು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಸೌಜನ್ಯ ಪರ ಹೋರಾಟಗಾರರೂ ಆಗಿರುವ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿತ್ತು. ಈ ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆಯೇ ಈ ಅರ್ಜಿಯು ನನ್ನ ನ್ಯಾಯಪೀಠದ ಮುಂದೆ ವಿಚಾರಣೆಗೆ ಬೇಡ.

ಈ ಹಿಂದೆ ಧರ್ಮಸ್ಥಳದ ಸಂಸ್ಥೆಗಳಿಗೆ ತಾನು ವಕೀಲನಾಗಿದ್ದ ಹಿನ್ನೆಲೆಯಲ್ಲಿ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ಪ್ರಸಾದ್ ಅವರು ಅರ್ಜಿಯನ್ನು ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ಸೂಚಿಸಿದರು. ಈ ಕಾರಣದಿಂದ ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿದ್ದು ಮಹೇಶ್ ಶೆಟ್ಟಿ ಇನ್ನೂ ಭೂಗತರಾಗಿದ್ದಾರೆ.

LEAVE A REPLY

Please enter your comment!
Please enter your name here