ಕಡಿರುದ್ಯಾವರ: ಸ. ಹಿ. ಪ್ರಾ. ಶಾಲೆಯಲ್ಲಿ ಮುಂಡಾಜೆ ಕ್ಲಸ್ಟರ್ ಮಟ್ಟದ 2025-26ನೇ ಸಾಲಿನ FLN ಕಲಿಕಾ ಹಬ್ಬ

0

ಕಡಿರುದ್ಯಾವರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಂಡಾಜೆ ಕ್ಲಸ್ಟರ್ ಮಟ್ಟದ 2025-26ನೇ ಸಾಲಿನ FLN ಕಲಿಕಾ ಹಬ್ಬವನ್ನು ಜ.12ರಂದು ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಜ್ಯೋತಿ ಅವರು ವಹಿಸಿದ್ದರು.

ಶಾಲೆಯ ಹಿರಿಯ ವಿದ್ಯಾರ್ಥಿ ರಾಮಯ್ಯ ಗೌಡ ವಳಂಬ್ರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾವತಿ, ಸದ್ಯಸರಾದ ಸೂರಜ್ ವಳಂಬ್ರ, ಲಾವಣ್ಯ, ಬೆಳ್ತಂಗಡಿ ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಧಾಕೃಷ್ಣ, ಶಾಲಾ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಶ್ರೀನಿವಾಸ ಗೌಡ, ಶಾಲಾ ಹಿರಿಯ ವಿದ್ಯಾರ್ಥಿ ಗೋಪಾಲ ಗೌಡ, ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಮುಂಡಾಜೆ ಕ್ಲಸ್ಟರ್ ಎಲ್ಲಾ ಸರಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳು, ಶಿಕ್ಷಕರು, ಗ್ರಾಮಸ್ಥರು, ಶಿಕ್ಷಕರು ಉಪಸ್ಥಿತರಿದ್ದರು.

ಶಾಲಾ ಹಿರಿಯ ವಿದ್ಯಾರ್ಥಿ ರಾಮಯ್ಯ ಗೌಡ ವಳಂಬ್ರರವರಿಗೆ ಶಾಲಾ ಎಸ್.ಡಿ.ಎಂ.ಸಿಯಿಂದ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here