






ಕಲ್ಮoಜ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಚಾರ್ಮಾಡಿ- ಉಜಿರೆ ರಸ್ತೆಯ ನಿಡಿಗಲ್ ನಲ್ಲಿ ಜ. 18ರಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.


ಕಾರಿನಲ್ಲಿದ್ದವರು ಶಿವಮೊಗ್ಗದಿಂದ ಹೊರಟು ಧರ್ಮಸ್ಥಳ ತೆರಳುತ್ತಿದ್ದರು ಎನ್ನಲಾಗಿದೆ. ನಿಡಿಗಲ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಪಲ್ಟಿಯಾಗಿದೆ. ಕಾರು ಸಂಪೂರ್ಣ ಹಾನಿಯಾದರೂ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.









