






ಉಜಿರೆ: 2025 -26ನೇ ಸಾಲಿನ ಉಜಿರೆ ಹಳೆಪೇಟೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಪೆರ್ಲ ಮುಂಡತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.13ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ದೇವರಾಜ ವಹಿಸಿದ್ದರು.



ಮುಖ್ಯ ಅತಿಥಿಗಳಾದ ಹಳೆಪೇಟೆ ಉಜಿರೆ ವಲಯದ ಸಿ.ಆರ್.ಪಿ. ಪ್ರತಿಮ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಕ್ಷೇತ್ರ ಶಿಕ್ಷಣ ಸಂಯೋಜಕಿ ಚೇತನಾಕ್ಷಿ ಆಗಮಿಸಿ ಮಕ್ಕಳಿಗೆ ಶುಭ ಹಾರೈಸಿದರು. ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಲಲಿತ, ಗುರುಪ್ರಸಾದ್, ಮಂಜುನಾಥ, ಪ್ರಾಥಮಿಕ ಶಿಕ್ಷಕ ಸಂಘದ ಪದಾಧಿಕಾರಿಗಳಾದ ಸುರೇಶ್ ಮಾಚಾರ್, ಐರಿನ್ ಡೇಸ, ಕೊಕ್ಕಡ ವಲಯದ ಸಿ. ಆರ್. ಪಿ. ವಿಲ್ಫ್ರೆಡ್ ಪಿಂಟೊ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ವಿವಿಧ ರೀತಿಯ ಮನರಂಜನೆ ನೀಡುವ ಚಟುವಟಿಕೆಗಳನ್ನು ಏರ್ಪಡಿಸಲಾಯಿತು. ಮುಖ್ಯ ಶಿಕ್ಷಕಿ ಸೇವಂತಿ ಬಿ. ಸ್ವಾಗತಿಸಿ , ಶಾಲಾ ಶಿಕ್ಷಕಿ ಉಷಾಲತಾ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಸಂಪನ್ಮೂಲ ವ್ಯಕ್ತಿಗಳು, ಉಜಿರೆ ಕ್ಲಸ್ಟರ್ ನ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಪ್ರೀತಿ ಕುಮಾರಿ ವಂದಿಸಿದರು.









