






ಬೆಳ್ತಂಗಡಿ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಗುರುದೇವ ಮಠದ ಟ್ರಸ್ಟಿಯಾಗಿ ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ಬಂಗೇರ ಅವರನ್ನು ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ನೇಮಕ ಮಾಡಿದ್ದು, ಅವರನ್ನು ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯಿಂದ ಗೌರವಿಸಲಾಯಿತು.


ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ನಿವೃತ್ತ ಎಸ್. ಪಿ. ಪೀತಾಂಬರ ಹೇರಾಜೆ, ಸಂಗೀತ ಹೇರಾಜೆ, ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಕಾರ್ಯದರ್ಶಿ ಶಾಂಭವಿ ಬಂಗೇರ, ಜೊತೆ ಕಾರ್ಯದರ್ಶಿ ಶೋಭಾ ಜಯಕುಮಾರ್, ಖಜಾಂಜಿ ತುಳಸಿ ವಸಂತ್, ಬಿಲ್ಲವ ಮಹಿಳಾ ವೇದಿಕೆ ಮಾಜಿ ಅಧ್ಯಕ್ಷರಾದ ಪ್ರೇಮ ಉಮೇಶ್, ರಾಜಶ್ರೀ ರಮಣ್, ಬಿಲ್ಲವ ಮಹಿಳಾ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.









