ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

0

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ಆಲಂಗಾಯಿ ನಿವಾಸಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ (70) ಜ.19ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಸಣ್ಣ ಪ್ರಾಯದಲ್ಲೇ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಮೈಗೂಡಿಸಿಕೊಂಡು, ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿದ್ದ ಅವರು ನೆರಿಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ, ಕರ್ನಾಟಕ ಸರ್ಕಾರದ ಭೂ ನ್ಯಾಯ ಮಂಡಳಿ ಮಾಜಿ ಸದಸ್ಯರಾಗಿ, ಮಲೆಕುಡಿಯ ಸಮುದಾಯದ ಹಿರಿಯ ಸದಸ್ಯರಾಗಿ, ಕೊಯ್ಯೂರು ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪರಿಚಾರಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಕಲ್ಯಾಣಿ, ಪುತ್ರರಾದ ಲೀಲಾಧರ, ರಾಘವೇಂದ್ರ, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ನೀಲಯ್ಯ ಮಲೆಕುಡಿಯರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮೆಸ್ಕಾಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಗಂಗಾಧರ ಗೌಡ, ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗೇಶ್ ಗೌಡ, ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ, ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here