ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

0

ಧರ್ಮಸ್ಥಳ: ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಕನ್ಯಾಡಿ ಸೇವಾಭಾರತಿ ಹಾಗೂ ಶ್ರೀ ದುರ್ಗಾ ಮಾತೃ ಮಂಡಳಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಜ. 19ರಂದು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಧನಲಕ್ಷ್ಮೀ ಮಾತನಾಡಿ, ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಕಲಿತ ವಿದ್ಯೆ ಎಂದಿಗೂ ನಮಗೆ ಶಾಶ್ವತ ಮಹಿಳೆಯರು ಯಾವತ್ತಿಗೂ ಇನ್ನೊಬ್ಬರಿಗೆ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯ ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗುವಂತೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಪಿಡಿಓ ಗಾಯತ್ರಿ, ಕನ್ಯಾಡಿ ಸೇವಾಭಾರತಿ ಅಧ್ಯಕ್ಷೆ ಸ್ವರ್ಣಗೌರಿ, ಶ್ರೀ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷೆ ಮಮತಾ, ಕೌಶಲ್ಯ ವಲಯ ಮೇಲ್ವಿಚಾರಕಿ ವೀಣಾಶ್ರೀ ಕೆ.ಕೆ., ಗ್ರಾಮ ಪಂಚಾಯತ್ ಸದಸ್ಯೆ ವಸಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 32 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

ಟೈಲರಿಂಗ್ ತರಬೇತುದಾರರಾದ ಸುಮತಿ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ಟೈಲರಿಂಗ್ ಶಿಬಿರಾರ್ಥಿಗಳ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

LCRP ಪುಷ್ಪಾವತಿ ಸ್ವಾಗತಿಸಿ, ಮಾನ್ವಿಶ್ರೀ ಒಕ್ಕೂಟದ MBK ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿ, ಪಶು ಸಖಿ ಯಶೋಧ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here