ಮಡಂತ್ಯಾರು: ಗ್ರಾಮ ಪಂಚಾಯತ್ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

0

ಮಡಂತ್ಯಾರು: ಗ್ರಾಮ ಪಂಚಾಯತ್ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆಯು ಜ. 20ರಂದು ನಡೆಯಿತು. ಸಭಾಧ್ಯಕ್ಷತೆಯನ್ನು‌ ಕೆ.ಪಿ.ಎಸ್. ಪುಂಜಾಲಕಟ್ಟೆಯ ವಿದ್ಯಾರ್ಥಿ ಹಂಶಿಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ, ಉಷಾ ಕಾಮತ್, ಆರ್ಥಿಕ ಸಮಾಲೋಚಕರು, ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಗ್ರಾ.ಪಂ. ಅಧ್ಯಕ್ಷೆ ರೂಪಾ ಎ.ಎಸ್., ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಸದಸ್ಯರಾದ ಶಶಿಪ್ರಭಾ, ಸಂಗೀತಾ ಶೆಟ್ಟಿ, ಕಿಶೋರ್ ಕುಮಾರ್ ಶೆಟ್ಟಿ, ರಾಜೀವ ಪೂಜಾರಿ, ವಿಶ್ವನಾಥ ಪೂಜಾರಿ ಉಪಸ್ಥಿತರಿದ್ದರು.

ಕೆಪಿಎಸ್ ಪುಂಜಾಲಕಟ್ಟೆ, ಸೇಕ್ರೆಡ್ ಹಾರ್ಟ್ ಸ್ಕೂಲ್ ಮತ್ತು ಗಾರ್ಡಿಯನ್ ಎಂಜಲ್ಸ್ ಹಿ.ಪ್ರಾ ಶಾಲೆ ಹಾಗೂ ಸ.ಹಿ.ಪ್ರಾ.ಶಾಲೆ ಕುಂಜತ್ತೋಡಿ ಇಲ್ಲಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಗ್ರಾ.ಪಂ. ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಪಿಡಿಓ ಶ್ರೀನಿವಾಸ ಡಿ.ಪಿ. ಸ್ವಾಗತಿಸಿ, ನಿರೂಪಿಸಿದರು. ಹಾಗೂ ಗ್ರಂಥಾಲಯ ಮೇಲ್ವಿಚಾರಕಿ ಸರೋಜಿನಿ ಬಿ‌. ವಂದಿಸಿದರು.‌

LEAVE A REPLY

Please enter your comment!
Please enter your name here