








ಕೊಯ್ಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧರ್ಮಸ್ಥದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕೊಯ್ಯೂರು ಗ್ರಾಮ ಪಂಚಾಯತ್ ಕಟ್ಟಡಕ್ಕೆ ರೂ. 2,50,000 ಸಹಾಯಧನವನ್ನು ಮಂಜೂರು ಮಾಡಿದ್ದು, ಜ. 20ರಂದು ತಾಲೂಕಿನ ಯೋಜನಾಧಿಕಾರಿ ಯಶೋಧರ ಹಸ್ತಾಂತರ ಮಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಮಣಿ, ಉಪಾಧ್ಯಕ್ಷ ಹರೀಶ್ ಬಜಿಲ, ಪಂಚಾಯತ್ ಸದಸ್ಯರು ಮತ್ತು ಪಂಚಾಯತ್ ನ ಸಿಬ್ಬಂದಿ ವರ್ಗದವರು, ಒಕ್ಕೂಟದ ಅದ್ಯಕ್ಷ ಧನಂಜಯ, ರವೀಂದ್ರ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ಸುಶಾಂತ್, ಸೇವಾಪ್ರತಿನಿಧಿ ಕುಸುಮಾವತಿ ಉಪಸ್ಥಿತರಿದ್ದರು.









