








ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು ಮೂಡಲ ಎಂಬಲ್ಲಿ ಚಿರತೆ ಓಡಾಟ ಬಗ್ಗೆ ಪಂಚಾಯತ್ ಸದಸ್ಯ ಚಂದ್ರರಾಜ್ ಇವರಿಗೆ ಸ್ಥಳೀಯರು ತಿಳಿಸಿದ್ದರು.ಈ ಬಗ್ಗೆ ತಕ್ಷಣ ಸ್ಪಂದಿಸಿದ ಅರಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಸೇರಿದಂತೆ ಇನ್ನಿತರ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









