ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಕ್ಷರ ದಾಸೋಹ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಗಾರ

0

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ “ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್” ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಗಾರ ಜ. 17ರಂದು ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ.ದೀಪ ಬೆಳಗಿಸಿ ನಂತರ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ ಮಾತನಾಡಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಈ ಯೋಜನೆಯ ಉದ್ದೇಶ ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಕೊಡುವುದು. ಇದು ಹಸಿವನ್ನು ತಣಿಸುತ್ತದೆ ಮಾತ್ರವಲ್ಲ ಆರೋಗ್ಯಕರ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಎಂದರು.

ತಾಲೂಕು ಆರೋಗ್ಯಾ ಶಿಕ್ಷಣಾಧಿಕಾರಿ ಅಮ್ಮಿ ಸಿಬ್ಬಂದಿಯವರಿಗೆ ಪೋಷಕಾಂಶಯುಕ್ತ ಆಹಾರ ಮತ್ತು ಸ್ವಛ್ಛತೆಯನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎನ್ನುವ ಬಗ್ಗೆ ಮಾಹಿತಿ ನೀಡಿದರು. ಅಡುಗೆ ಸಿಬ್ಬಂದಿಯವರು ಮಾಡಿ ತಂದ ವಿವಿಧ ಖಾದ್ಯಗಳ ಪ್ರದರ್ಶನ ನಡೆಯಿತು.ಸರಕಾರಿ ಪ್ರೌಡಶಾಲೆ ಕಲ್ಮಂಜದ ಬಿಸಿಯೂಟ ಸಹಾಯಕಿ ಕುಸುಮಾವತಿ ಪ್ರಾರ್ಥನೆ ನೆರವೇರಿಸಿದರು. ಅಗ್ನಿ ಶಾಮಕ ದಳ ಮತ್ತು ಇಂಡೇನ್ ಗ್ಯಾಸ್‌ನವರು ಪ್ರಾತ್ಯಾಕ್ಷತೆಯ ಮೂಲಕ ಮಾಹಿತಿ ನೀಡಿದರು ಬೆಳ್ತಂಗಡಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ವಾರಿಜ ಸ್ವಾಗತಿಸಿದರು. ಹಳಪೇಟೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here