








ಕಳೆಂಜ: ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ ಜ.25ರಂದು ಶತಮಾನೋತ್ಸವ ಸಮಿತಿ, ಚಿಗುರು ಹಿರಿಯ ವಿದ್ಯಾರ್ಥಿ ಸಂಘ, ಎಸ್. ಡಿ. ಎಮ್ ಸಮಿತಿ ಇದರ ಸಹಭಾಗಿತ್ವದಲ್ಲಿ ಹಾಗೂ ಬೆನಕ ಹೆಲ್ತ್ ಸೆಂಟರ್ ಮತ್ತು ಎ.ಜೆ. ರಕ್ತ ಕೇಂದ್ರ, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ಶತಮಾನೋತ್ಸವದ ಪ್ರಯುಕ್ತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯುಲ್ಲಿ ನಡೆಯಿತು. ಈ ಶಿಬಿರದಲ್ಲಿ 65 ಜನ ರಕ್ತದಾನ ಮಾಡಿದರು. 85 ಜನ ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.









