






ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ 77ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯೆ ಮೇರಿ ಯು.ಪಿ. ಅವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಅವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ತತ್ವ-ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಪರಸ್ಪರ ಪ್ರೀತಿ, ಸಮಾನತೆ, ಒಗ್ಗಟ್ಟಿನಿಂದ ಬಾಳಬೇಕು ಎಂದರು.



ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ತದನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು. ಸಂಸ್ಥೆಯ ಸಿಬ್ಬಂದಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.









