






ಬೆಳ್ತಂಗಡಿ: ನ್ಯಾಯಾಲಯದಲ್ಲಿ 77ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಜ.26ರಂದು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಹಿರಿಯ ಶ್ರೇಣಿ ನ್ಯಾಯಾಧೀಶ ಮನು ಬಿ.ಕೆ. ಅವರು ಧ್ವಜಾರೋಹಣ ನೆರವೇರಿಸಿದರು.
ವಕೀಲರ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ನ್ಯಾಯಾಧೀಶ ಮನು ಬಿ.ಕೆ. ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ದೇಶವು ಪ್ರಜಾಸತಾತ್ಮಕ ದೇಶವಾಗಿದ್ದು ಎಲ್ಲಾ ಜಾತಿ ಧರ್ಮದವರು ಕೂಡ ವಾಸಿಸುವಂತಹ ಹಕ್ಕಿದೆ ಅದನ್ನು ನಾವು ಕಾಪಾಡಿಕೊಂಡು ಹೋಗಬೇಕು ಎಂಬ ಸಂದೇಶವನ್ನು ನೀಡಿದರು.


ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೊ ಅವರು ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ವಕೀಲರ ಸಂಘದ ಹಿರಿಯ ಸಮಿತಿಯ ಅಧ್ಯಕ್ಷ ಶಿವಕುಮಾರ್ ಎಸ್. ಎಂ. ಅವರು ಗಣರಾಜ್ಯೋತ್ಸವದ ಕುರಿತು ಅನಿಸಿಕೆ ಹಂಚಿಕೊಂಡರು. ಪಥ ಸಂಚಲನದಲ್ಲಿ ಭಾಗವಹಿಸಿದ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ವಕೀಲರ ಸಂಘದ ವತಿಯಿಂದ ಪ್ರಶಂಸನಾ ಪತ್ರವನ್ನು ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ನ್ಯಾಯಾಧೀಶ ವಿಜೇಂದ್ರ ಟಿ. ಎಚ್., ಅಪರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ಎ, ಯುವ ವಕೀಲರ ವೇದಿಕೆಯಅಧ್ಯಕ್ಷ ಉದಯ್ ಬಿ.ಕೆ., ವಕೀಲರ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಹಿರಿಯ ವಕೀಲರ ಸಮಿತಿಯ ಸದಸ್ಯರು, ವಕೀಲರು, ನ್ಯಾಯಾಲಯದ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಹಾಗೂ ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಅವರು ಸ್ವಾಗತಿಸಿದರು.









