






ವೇಣೂರು : ವೇಣೂರರುಸರಕಾರಿ ಪ್ರೌಢ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಉಪ ಪ್ರಾಂಶುಪಾಲ ವೆಂಕಟೇಶ ತುಳುಪುಳೆ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಉಪಸ್ಥಿತರಿದ್ದರು.



ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಭಾಗ, ಬೆಳಗಾಂ ಇಲ್ಲಿಯ ಪ್ರಾಧ್ಯಾಪಕಿ ಶಾಂತ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಸಮಾಜ ವಿಜ್ಞಾನ ಶಿಕ್ಷಕಿ ಸುಶೀಲಾ .ಜಿ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಹಿರಿಯ ಶಿಕ್ಷಕಿ ಸುಕನ್ಯಾ ಪ್ರಭು, ಇತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.









