







ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆ ಇವರ ಆಶ್ರಯದಲ್ಲಿ ನಡೆದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಹಾಗೂ ದ್ವಿಚಕ್ರ ವಾಹನಗಳ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರ ಲಕ್ಷ್ಮೀ ನಾರಾಯಣ ರಾವ್ ಮಾತನಾಡಿ, ವೃತ್ತಿಯಲ್ಲಿ ಶಿಸ್ತು, ಸೇವಾಭಾವ ಹಾಗೂ ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಅನುಭವ ಗಳಿಸಬೇಕು ಎಂದು ಸಲಹೆ ನೀಡಿದರು.



ಖಾವಂದ ಪರಿಕಲ್ಪನೆಯ ರುಡ್ ಸೆಟ್ ಸಂಸ್ಥೆ ಕೇವಲ ತಾಂತ್ರಿಕ ತರಬೇತಿಗೆ ಸೀಮಿತವಾಗದೇ, ಜೀವನ ಕೌಶಲ್ಯಗಳನ್ನು ಕಲಿಸುವ ಅತ್ಯಂತ ಮಹತ್ವದ ಸಂಸ್ಥೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ವಹಿಸಿ ಮಾತನಾಡಿ, ತರಬೇತಿ ಪಡೆದವರು ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸ್ವ ಉದ್ಯೋಗ ಆರಂಭಿಸುವಂತೆ ಕರೆ ನೀಡಿದರು.ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ್ ಸ್ವಾಗತಿಸಿ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಣೆ ನಡೆಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ವಂದಿಸಿದರು ಸೀತಾ ಹೆಗಡೆ, ರಶ್ಮಿ ಪ್ರಾರ್ಥನೆ ನೆರವೇರಿಸಿದರು. ತರಬೇತಿಾರ್ಥಿಗಳಾದ ಗಿರೀಶ್, ಫುರಂದರ ರೈ, ಜೋಸೆಫ್ ಪಿಂಟೋ, ಸುರೇಶ್, ತರಬೇತಿ ಅನುಭವಗಳನ್ನು ಹಂಚಿಕೊಂಡರು.











