ಫೆ.6:ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

0

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ.6 ರಂದು ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆ ಅವರ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಜ.6 ಶುಕ್ರವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಲೆ ಮತ್ತು ಕುತ್ತಿಗೆಯ ಆಂಕೊಸರ್ಜನ್, ಕಿವಿ- ಮೂಗು-ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್ (ಒಃBS, ಒS (ಇಓಖಿ &ಚಿmಠಿ; ಊಓS) ರೋಗ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, ಒಳರೋಗಿ ವಿಭಾಗದ ಶುಲ್ಕ ಮತ್ತು ಔಷಧದಲ್ಲಿ ೧೦% ಮತ್ತು ರೋಗ ತಪಾಸಣೆ, ರೇಡಿಯಾಲಜಿಯಲ್ಲಿ ೨೦% ರಿಯಾಯಿತಿ ದೊರೆಯಲಿದೆ.

ಶಿಬಿರದಲ್ಲಿ ಕಿವಿ,ಮೂಗು, ಗಂಟಲುಗಳ ತಪಾಸಣೆ, ಶ್ರವಣ ಪರೀಕ್ಷೆ, ಮಕ್ಕಳು ಮತ್ತು ವಯಸ್ಕರಲ್ಲಿ ಮೂಗಿನ ದ್ರವದ ತಪಾಸಣೆ,ಅಲರ್ಜಿಗೆ ಚಿಕಿತ್ಸೆ, ಮೈಗ್ರೇನ್ ತಲೆನೋವಿಗೆ ಚಿಕಿತ್ಸೆ, ವರ್ಟಿಗೋ ಪರೀಕ್ಷೆ ಮತ್ತು ಚಿಕಿತ್ಸೆ, ಧ್ವನಿ ಬದಲಾವಣೆಗಳ ಪರೀಕ್ಷೆ ಮತ್ತು ಚಿಕಿತ್ಸೆ, ಕಿವುಡುತನದ ಪರೀಕ್ಷೆ ಮತ್ತು ಚಿಕಿತ್ಸೆ, ಕಿವಿ-ಮೂಗು-ಗಂಟಲುಗಳ ಕ್ಯಾನ್ಸರ್ ತಪಾಸಣೆ, ಗೊರಕೆಗೆ ಚಿಕಿತ್ಸೆ ಮೊದಲಾದ ತಪಾಸಣೆ ಮತ್ತು ಚಿಕಿತ್ಸೆಗಳು ಉಚಿವಾಗಿ ದೊರೆಯಲಿದೆ.

ಹೆಸರು ನೋಂದಾಯಿಸಲು ೭೭೬೦೩೯೭೮೭೮ ಸಂಪರ್ಕಿಸಬಹುದು ಎoದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ ರ ಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here