






ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಸಹಕಾರದೊಂದಿಗೆ ಜ. 31 ರಂದು ಸಂಭ್ರಮ-2 ಯುವ ವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಪಣಕಜೆಯ ನವಸುಮ ನಿವಾಸದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಸ್ಪಂದನ ಹೃದಯ ಸ್ತಂಭನ ಹೃದಯಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಉಜಿರೆ ಬೆನಕ ಹೆಲ್ತ್ ಸೆಂಟರ್ ನ ತುರ್ತು ಚಿಕಿತ್ಸಾ ತಜ್ಞಾರಾದ ಡಾ. ಆದಿತ್ಯ ರಾವ್ CPR ಪ್ರಾತ್ಯಕ್ಷಿಕೆ ಮುಲಕ ಹೃದಯ ಸ್ತಂಭನ ಹಾಗೂ ಹೃದಯಘಾತವಾದಾಗ ನಾವು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.



ಕಾರ್ಯಕ್ರಮದಲ್ಲಿ ಘಟಕದ ಮಾಜಿ ನಿರ್ದೇಶಕ ದಿ. ಶಶಿಧರ ಆದೇಲು ಇವರ ಮಕ್ಕಳಿಗೆ ಘಟಕದ ವತಿಯಿಂದ ವಿದ್ಯಾನಿಧಿ ವಿತರಿಸಲಾಯಿತು. ಕೇಂದ್ರ ಸಮಿತಿಯ ಆರೋಗ್ಯ ನಿರ್ದೇಶಕರು ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮುಡುಕೋಡಿ ಕಾರ್ಯಕ್ರಮದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು ಮನೆಯ ಯಜಮಾನ ವಸಂತ ಪೂಜಾರಿ ಹಾಗೂ ಲೀಲಾವತಿ ಪನಕಜೆ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ. ಆದಿತ್ಯ ರಾವ್ ಇವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಘಟಕದ ಅಧ್ಯಕ್ಷ ಗುರುರಾಜ ಗುರಿಪಳ್ಳ ಅಧ್ಯಕ್ಷತೆ ವಹಿಸಿ ಕಾರ್ಯದರ್ಶಿ ಮಧುರ ರಾಘವ ವಂದಿಸಿದರು. ಘಟಕದ ಮಾಜಿ ಅಧ್ಯಕ್ಷ ಸದಾಶಿವ ಪೂಜಾರಿ ಊರ, ಕೋಶಾಧಿಕಾರಿ ನಾಗೇಶ್ ಅದೇಲು, ಯುವ ವಾಹಿನಿಯ ಪದಾಧಿಕಾರಿಗಳು ನಿರ್ದೇಶಕರು ಸಂಘಟನಾ ಕಾರ್ಯದರ್ಶಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮದ ನಂತರ ಘಟಕದ ಸದಸ್ಯರಿಗೆ ಮನೋರಂಜನ ಕಾರ್ಯಕ್ರಮಗಳು ನಡೆಯಿತು









