ಮಜಿಕುಡೇಲು ನಿವಾಸಿ ಸುಪ್ರೀತಾ ನಾಪತ್ತೆ

0

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(೨೦) ಎಂಬಾಕೆ ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನಿಡಲಾಗಿದೆ. ದಿ.ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವಳು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಪೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹತ್ತನೇ ತರಗತಿಯ ವರೆಗೆ ಕಲಿತಿರುವ ಈಕೆ 4 ಅಡಿ 6 ಇಂಚು ಎತ್ತರವಿದ್ದು, ಸಪೂರ ಶರೀರ, ಉರುಟು ಮುಖವನ್ನು ಹೊಂದಿರುತ್ತಾಳೆ. ಕನ್ನಡ ತುಳು ಭಾಷೆಯನ್ನು ಮಾತನಾಡುತ್ತಾಳೆ. ಈಕೆಯ ಬಗ್ಗೆ ತಿಳಿದವರು ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಠಾಣಾಧಿಕಾರಿ ಸುತೇಶ್ ಎಸ್. ಪ್ರಕಟನೆಯಲ್ಲಿ ವಿನಂತಿಸಿದ್ದಾರೆ. ಪೋಟೋ: ಸುಪ್ರೀತಾ

LEAVE A REPLY

Please enter your comment!
Please enter your name here