ನಿಡ್ಲೆ: ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ.ಡಿ.ವೀರೇಂದ್ರ ಹೆಗ್ಗಡೆ

0

ನಿಡ್ಲೆ: ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 2024-2025ನೇ ಸಾಲಿನಲ್ಲಿ ಕಾಯ್ದಿರಿಸಲಾದ ಅನುದಾನದಲ್ಲಿ ರೂ.5.00ಲಕ್ಷ ಮೊತ್ತವನ್ನು ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ವಿದ್ಯಾರ್ಜನೆಗಾಗಿ ಹಾಗೂ ನೂತನ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯನ್ನು ನಿರ್ವಹಿಸಲು ಅನುವಾಗುವಂತೆ ಬಿಡುಗಡೆ ಮಾಡಲಾಗಿದೆ.ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಶಾಲಾ ಹಳೆವಿದ್ಯಾರ್ಥಿ ಟ್ರಸ್ಟ್, ಶಾಲಾ ಆಡಳಿತ ಮಂಡಳಿ ಹಾಗೂ ಊರವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here