ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

0

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳಾದ ಕಬ್ ವಿಭಾಗದ ವಿಹಾನ್, ಅಹನ್ ಜೈನ್, ದೈವಿಕ್ ರೈ, ಚಿರಾಗ್ ಬುಲ್ ಬುಲ್ ವಿಭಾಗದ ಆದ್ವಿ ಎಲ್ ರೈ, ಯಕ್ಷಿತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಆಯೋಜಿಸಿದ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರೀಯ ಪ್ರಶಸ್ತಿಯಾದ ಗೋಲ್ಡನ್ ಆ್ಯರೋ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಇವರು ದೆಹಲಿ ಯಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.


ಮುಖ್ಯ ಶಿಕ್ಷಕರಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪ್ರಮೀಳಾ ಪೂಜಾರಿ ಮಕ್ಕಳಿಗೆ ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here