ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನಲ್ಲಿ ದೀಪ ಬೆಳಗುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ-ಜಾಗತಿಕವಾಗಿ ನರ್ಸಿಂಗ್ ವೃತ್ತಿಗೆ ಅವಕಾಶ ಹೆಚ್ಚುತ್ತಿದೆ: ಎಂ. ಜನಾರ್ಧನ್

0

ಗುರುವಾಯನಕೆರೆ: ನರ್ಸಿಂಗ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ವಿದ್ಯಾಭ್ಯಾಸ ಹಾಗೂ ಉದ್ಯೋಗಾವಕಾಶಗಳನ್ನು ಒದಗಿಸುತ್ತಿರುವ ಎನ್.ಇ.ಟಿ ನರ್ಸಿಂಗ್ ಕಾಲೇಜಿನಲ್ಲಿ ಬಿಎಸ್ ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಫೆ.7ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಉಜಿರೆ ಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ಧನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲೇಜಿನಲ್ಲಿರುವ ವೈದ್ಯಕೀಯ ಹಾಗೂ ಮೂಲ ಸೌಕರ್ಯಗಳಿಂದ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಜಾಗತಿಕವಾಗಿ ನರ್ಸಿಂಗ್ ವೃತ್ತಿಗೆ ಅವಕಾಶ ಹೆಚ್ಚುತ್ತಿದ್ದು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಎನ್.ಇ.ಟಿ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಾಜಿ ಪಿಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಐ-ಚೆಸ್ ಎಜುಕೇಶನ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕ ಜಿಮ್ಮಿ ಥೋಮಸ್,, ಉಪಾಧ್ಯಕ್ಷ ಜೆರಿಲ್ ಜಾನ್ಸನ್, ಪ್ರಾಂಶುಪಾಲ ಮನು ಕೆ ಜೋಸೆಫ್, ಆಡಳಿತಗಾರ ಲುಲು ಮರಿಯಾ, ಟ್ರಸ್ಟಿ ಹಾಗೂ ಅಭಯ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಶ್ರೀಹರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here