






ಮಲವಂತಿಗೆ: ಗ್ರಾಮ ಪಂಚಾಯತ್ ನಲ್ಲಿ ಸತತ 7 ವರ್ಷಗಳ ಕಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಪ್ರಸ್ತುತ ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ದಿ ಅಧಿಕಾರಿಯಾಗಿ ವರ್ಗಾವಣೆಗೊಂಡಿರುವ ರಶ್ಮಿ ಬಿ. ಪಿ. ಅವರಿಗೆ ಗ್ರಾಮ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭ ಫೆ. 5ರಂದು ನೆರವೇರಿತು. ಪಂಚಾಯತ್ ಸಿಬ್ಬಂದಿ ಅಕ್ಷತಾ ಅವರ ಪ್ರಾರ್ಥಿಸಿದರು.
ಕಾಂತಿ ದಿನೇಶ್ ಅವರು ಸ್ವಾಗತ ಕೋರುವ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ತದನಂತರ ಕಳೆದ 5 ವರ್ಷಗಳ ಅವಧಿಯಲ್ಲಿ ಅಭಿವೃದ್ದಿ ಕಾರ್ಯದಲ್ಲಿ ಸಹಕರಿಸಿದ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರಿಗೆ ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ ನಡೆಸಲಾಯಿತು.


ಅಭಿನಂದನೆಯನ್ನು ಸ್ವೀಕರಿಸಿದ ರಶ್ಮಿ ಬಿ. ಪಿ. ಅವರು ಪಂಚಾಯತ್ ಅಭಿವೃದ್ದಿ ಅಧಿಕಾರಿಯವರಿಗೆ, ಆಡಳಿತ ಮಂಡಳಿ ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದರು. ಅದೇ ರೀತಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರಕಾಶ್ ಅವರು ಸತತ 7 ವರ್ಷಗಳ ಅವಧಿಯಲ್ಲಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ರಶ್ಮಿ ಬಿ. ಪಿ. ಅವರ ಕೆಲಸ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಹಾಗೆಯೇ ಕಳೆದ 5 ವರ್ಷಗಳಲ್ಲಿ ಅಧ್ಯಕ್ಷರ ನೆಲೆಯಲ್ಲಿ ನಿರ್ವಹಿಸಿದ ಅಭಿವೃದ್ದಿ ಕಾರ್ಯದ ಬಗ್ಗೆ ಮಾತಾಡಿ ಸಹಕರಿಸಿದ ಉಪಾಧ್ಯಕ್ಷರಿಗೆ, ಸರ್ವಸದಸ್ಯರಿಗೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಸಿಬ್ಬಂದಿ ವರ್ಗಕ್ಕೆ ಹಾಗೂ ಗ್ರಾಮಸ್ಥರಿಗೆ ಶುಭ ಹಾರೈಸಿದರು.
ಮಲವಂತಿಗೆ ಗ್ರಾಮ ಪಂಚಾಯತ್ ನ ಪ್ರಸ್ತುತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ., ಸಿಬ್ಬಂದಿ ವರ್ಗ, ಮಲವಂತಿಗೆ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಹಾಗೂ ಗ್ರಾಮ ಸಹಾಯಕರು ಮತ್ತು ಪಂಚಾಯತ್ ನ ಮಾಜಿ ಅಧ್ಯಕ್ಷರು, ಸರ್ವಸದಸ್ಯರು, ಗ್ರಂಥಾಲಯ ಮೇಲ್ವಿಚಾರಕಿ, ಸ್ವಸಹಾಯ ಸಂಘದ M.B.K, LCRP, ಪಶುಸಖಿ, ಕೃಷಿಸಖಿ, ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ. ಕೆ. ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿ ಸದಾಶಿವ ಎ. ಧನ್ಯವಾದ ಕಾರ್ಯಕ್ರಮ ನೆರವೇರಿಸಿದರು.









