







ಉರುವಾಲು: ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಬ್ರಹ್ಮಶ್ರೀ ವಿಷ್ಣುಮೂರ್ತಿ ತಂತ್ರಿಯ ಎಡಪದವು ಇವರ ಉಪಸ್ಥಿತಿಯಲ್ಲಿ ಶ್ರೀ ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ವಾರ್ಷಿಕ ಜಾತ್ರೆ ಮತ್ತು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಫೆ.6 ರಂದು ಊರ-ಪರವೂರ ಭಕ್ತರಿಂದ ಹಸಿರುವಾಣಿ ಸಮರ್ಪಣೆ ನಡೆಯಿತು.ಹಸಿರುವಾಣಿ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ದೇವಿ ಪ್ರಸಾದ್ ಕಡಮ್ಮಾಜೆ ಉದ್ಘಾಟಿಸಿದರು. ಉರುವಾಲು ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಸೇರಿ ಭವ್ಯ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಆಗಮಿಸಲಾಯಿತು.



ವಿವಿಧ ಭಜನಾ ತಂಡಗಳಿಂದ ಭಜನೋತ್ಸವ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮ ಉದ್ಘಾಟನೆಯನ್ನು ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಾರ್ಯಾಧ್ಯಕ್ಷ ಸುಧೀರ್ ಕುಮಾರ್ ಹಲೇಜಿ ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಪಿಲಿಗೂಡು ಶಿಲ್ಪಕಲಾ ಕೇಂದ್ರದ ಅಧ್ಯಕ್ಷರಾದ ಪದ್ಮನಾಭ ಶಿಲ್ಪಿ, ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಭಜನಾ ತರಬೇತುದಾರರಾದ ನಾಗೇಶ್ ನೆರಿಯ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ವಂದಿಸಿದರು. ಫೆ.7 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಶ್ರೀ ಗಣಪತಿ ಹವನ, ಪ್ರಧಾನ ಹೋಮ, ಕಲಶ ಪ್ರತಿಷ್ಠೆ ಹಾಗೂ ಅಭಿಷೇಕ, ಶ್ರೀ ದೇವರಿಗೆ 25 ಕಲಶಾಭಿಷೇಕ, ಶತರುದ್ರಾಭಿಷೇಕ, ವಿಶೇಷ ಪೂಜೆ ನಡೆಯಿತು. ನಂತರ ಭಜನಾ ಕಾರ್ಯಕ್ರಮ ನಡೆಯಿತು.
ಭಜನಾ ಕಾರ್ಯಕ್ರಮ ಉದ್ಘಾಟನೆಯನ್ನು ಶ್ರೀ ಮಹಮ್ಮಾಯಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ವಿನೋದ್ ನಾಯ್ಕ ಜಲದುರ್ಗ ಇವರು ಭಜನೆಗೆ ಚಾಲನೆ ನೀಡಿದರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ್ ಗೌಡ ಬನಾರಿ, ಪ್ರಸಾದ್ ಕಡ್ತಿಲ, ದೇವಸ್ಥಾನದ ಸಹ ಮೋಕ್ತೇಸರರಾದ ಜನಾರ್ದನ ಗೌಡ ನಾಕಾಲು, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಕೇಶವತಿ, ಜೊತೆ ಕಾರ್ಯದರ್ಶಿ ಗಣೇಶ ಗೌಡ ಬನಾರಿ, ವಿಘ್ನೇಶ್ವರ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.ಸೀತಾರಾಮ ಆಳ್ವ ಕೊರಿಂಜ ಕಾರ್ಯಕ್ರಮ ನಿರೂಪಿಸಿದರು.









