






ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ಚಾಣಕ್ಯ ಸಂಜೀವಿನಿ ಮಹಿಳಾ ಒಕ್ಕೂಟ (ರಿ) ಅಳದಂಗಡಿ ಇದರ ಚಾಣಕ್ಯ ಸಂಜೀವಿನಿ ಕಟ್ಟಡವನ್ನು ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಫೆ.9 ರಂದು ಉದ್ಘಾಟಿಸಿ, ದೀಪ ಬೆಳಗಿಸಿ ಶುಭ ಹಾರೈಸಿದರು.



ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಸದಸ್ಯರುಗಳು, MBK, LCRP ಗಳು, ಕೃಷಿ ಸಖಿ, ಪಶು ಸಖಿ, ಹಾಜರಿದ್ದರು. ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಪಂಚಾಯತ್ ಲೆಕ್ಕ ಸಹಾಯಕರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.









