






ಧರ್ಮಸ್ಥಳ: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಧರ್ಮಸ್ಥಳದ ಕಲ್ಲೇರಿ ಪೆಟ್ರೋಲ್ ಪಂಪ್ ಬಳಿ ಫೆ. 9ರಂದು ನಡೆದಿದೆ.
ಈ ಅಪಘಾತದಲ್ಲಿ ಕಾರು ಚಾಲಕರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



ಕೊಕ್ಕಡ ಗಣೇಶ ಡಾಕ್ಟರ್ ಕಾರ್ಯಕ್ರಮ ಮುಗಿಸಿ ಊರಿನ ಕಡೆಗೆ ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ. ಮತ್ತೊಂದು ಸುಬ್ರಮಣ್ಯದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಟೂರಿಸ್ಟ್ ವಾಹನ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಚಾಲಕರ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









