ಎಸ್‌.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ವತಿಯಿಂದ ನಬಾರ್ಡ್ ಹಾಗೂ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ಹಣಕಾಸು ಹಾಗೂ ಡಿಜಿಟಲ್ ಸಾಕ್ಷರತಾ ಶಿಬಿರವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ರುಡ ಸೆಟ್ ಸಂಸ್ಥೆಯ ನಿರ್ದೇಶಕರು ಅಜೇಯ, ಅವರು ಸ್ವ ಉದ್ಯೋಗ, ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಿಗುವ ಸಾಲಸೌಲಭ್ಯಗಳು , ಹಾಗೂ ರುಡ್ ಸೆಟ್ ಸಂಸ್ಥೆಯ ವಿವಿಧ ತರಬೇತಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಷಾ ನಾಯಕ್, ಸಲಹೆಗಾರರು ಅಮೂಲ್ಯ ಹಣಕಾಸು ಸಾಕ್ಷರತಾ ಕೇಂದ್ರ ಬೆಳ್ತಂಗಡಿ ಅವರು ಮಾತನಾಡಿ , ಸೈಬರ್ ಭದ್ರತೆ, ವಿವಿಧ ಬ್ಯಾಂಕಿಂಗ್ ಸೇವೆಗಳು, ಡಿಜಿಟಲ್ ವ್ಯವಹಾರದ ಸುರಕ್ಷತಾ ಕ್ರಮಗಳು, ಉಳಿತಾಯದ ಮಹತ್ವ , ಸಾಲದ ಶಿಸ್ತು ಹಾಗೂ ಹಣಕಾಸು ಭದ್ರತೆ, ಮತ್ತು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ (PMJJBY, PMSBY, APY) ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಹಾಗೂ ಸುರಕ್ಷಿತ ಡಿಜಿಟಲ್ ವ್ಯವಹಾರಗಳ ಕುರಿತು ಹೆಚ್ಚಿನ ಅರಿವು ಪಡೆದರು. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ, ಚಂಪಾ, ಪ್ರಬಂಧಕರು ಕೆನರಾ ಬ್ಯಾಂಕ್ ಬೆಳ್ತಂಗಡಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಕೃತಿ ಪಿ ವಿ ಸ್ವಾಗತಿಸಿ, ವರ್ಷಾ ಕೆ.ಪಿ. ನಿರೂಪಿಸಿದರು. ಶ್ರೇಯಸ್ ಆರ್. ರಾವ್ ವಂದಿಸಿದರು.

LEAVE A REPLY

Please enter your comment!
Please enter your name here