







ಉಜಿರೆ : ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಮಾ. 3 ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವತಿಯಿಂದ ಸ್ವಚ್ಛತಾ ಮಾಡುವ ಕೆಲಸದಲ್ಲಿ ಶ್ರಮದಾನದಲ್ಲಿ ಭಾಗವಹಿಸಿದ್ದರು.



ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ಅಸ್ರನ್ನ ಗಿರೀಶ್ ಬಾರಿತ್ತಾಯ, ಜಾತ್ರಾ ಸಮಿತಿಯ ಸಂಚಾಲಕ ಲಿಂಗಪ್ಪ ಪೂಜಾರಿ, ಪದಾಧಿಕಾರಿಗಳು, ಭಜನಾ ಮಂಡಳಿಯ ಸದಸ್ಯರು, ಊರವರು ಶ್ರಮದಾನದಲ್ಲಿ ಭಾಗವಹಿಸಿದ್ದರು.









