ವಿಬಿಜಿ ರಾಮ್ ಜೀ ಕಾಯ್ದೆ ಕುರಿತು ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಜನಜಾಗೃತಿ ಕಾರ್ಯಕ್ರಮ: ಬೃಹತ್ ಜಾಥಾ

0

ಬಳ್ತಂಗಡಿ: ಕೇಂದ್ರ ಸರಕಾರದ ವಿಬಿಜಿ ರಾಮ್ ಜೀ ಕಾಯ್ದೆಯ ಕುರಿತು ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಜನಜಾಗೃತಿ ಕಾರ್ಯಕ್ರಮ ಹಾಗೂ ಬೃಹತ್ ಜಾಥಾ ಫೆ. ‌16 ರಂದು ಬೆಳ್ತಂಗಡಿ ಶ್ರಮಿಕ ಕಚೇರಿಯಿಂದ ಸಂತೆಕಟ್ಟೆ ಸಮಾಜ ಮಂದಿರವರೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆಳಾಲು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಶಕ್ತಿ ಕೇಂದ್ರ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ಯಾಕ್ಸ್ ಅಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.ವಸಂತಿ ಮಚ್ಚಿನ ವಂದೇ ಮಾತರಂ ಗೀತೆ ಹಾಡಿದರು ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here