ಮಿತ್ತಬಾಗಿಲು: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಿತ್ತಬಾಗಿಲು ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.14 ರಂದು ನಡೆಯಿತು.

ಮನೆಯ ಯಜಮಾನರಾದ ನೋಣಯ್ಯ ಪೂಜಾರಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಜಾತ್ರೋತ್ಸವಕ್ಕೆ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿ ಸದಸ್ಯರೂ,ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಪ್ರಸ್ತಾವಿಕವಾಗಿ ಮಾತನಾಡುತ್ತಾ ಕ್ಷೇತ್ರ ನಡೆದು ಬಂದ ಹಾದಿಯನ್ನು ವಿವರಿಸಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ಗ್ರಾಮದ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ಕಾರ್ಯಕ್ರಮದಲ್ಲಿ ಲೋಕೇಶ್ ಪೂಜಾರಿ, ದೇಜಮ್ಮ, ಧರ್ಣಮ್ಮ, ಸುರೇಂದ್ರ ಪೂಜಾರಿ, ವಂದಿತ್ ಮುಂತಾದವರು ಉಪಸ್ಥಿತರಿದ್ದರು.ಲಾಯಿಲ ವಲಯ ಸಂಚಾಲಕರಾದ ಚಂದ್ರಶೇಖರ್ ಇಂದಬೆಟ್ಟು ಕಾರ್ಯಕ್ರಮವನ್ನು ಸಂಯೋಜಿಸಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here