






ಬೆಳ್ತಂಗಡಿ : ಶ್ರೀ ಛತ್ರಪತಿ ಶಿವಾಜಿ ಜಯಂತಿಯನ್ನು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಫೆ.19ರಂದು ಆಚರಿಸಲಾಯಿತು.ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.



ಕಾರ್ಯಕ್ರಮದಲ್ಲಿ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕು ಕಚೇರಿಯ ಉಪತಹಶೀಲ್ದಾರರುಗಳು, ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.









