ನಾವೂರು: ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ನಾವೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಲಾಯಿಲ ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.15 ರಂದು ಆದಿತ್ಯವಾರ ಸಮುದಾಯ ಭವನ ನಾವೂರು ಇಲ್ಲಿ ನಡೆಯಿತು.

ಶ್ರೀ ಗುರು ನಾರಾಯಣ ಸೇವಾ ಸಂಘ ಬೆಳ್ತಂಗಡಿ ಇಲ್ಲಿನ ಮಾಜಿ ನಿರ್ದೇಶಕರಾದ ತನುಜಾ ಶೇಖರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಜಾತ್ರೋತ್ಸವಕ್ಕೆ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿ ಸದಸ್ಯರೂ,ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ಶ್ರೀ ನಿತ್ಯಾನಂದ ನಾವರ ಅವರು ಪ್ರಸ್ತಾವಿಕವಾಗಿ ಮಾತನಾಡುತ್ತಾ ಕ್ಷೇತ್ರ ನಡೆದು ಬಂದ ಹಾದಿಯನ್ನು ವಿವರಿಸಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ಗ್ರಾಮದ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ , ಗೆಜ್ಜೆ ಗಿರಿ ಗ್ರಾಮ ಸಮಿತಿ ಅಧ್ಯಕ್ಷರಾದ ಯೋಗೀಶ್ ಕಣಾಲು, ಕಾರ್ಯದರ್ಶಿ ಜಗದೀಶ್ ಇಡ್ಯಾಲ , ಶ್ರೀ ಗುರು ನಾರಾಯಣ ಸೇವಾ ಸಂಘ ನಾವೂರು ಇದರ ಅಧ್ಯಕ್ಷರಾದ ಕಮಲಾಕ್ಷ ಅಲೆಕ್ಕಿ, ಕಾರ್ಯದರ್ಶಿ ಪ್ರಕಾಶ್ ಕಣಾಲ್, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಸುರೇಶ್ ಬಂಗೇರ ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ದಿನೇಶ್ ಮಲ್ಲಡ್ಕ, ಅಭಿಷೇಕ್, ಪ್ರಣಿತ್, ಪ್ರಭೀಕ್, ಸುಶಾಂತ್, ಪ್ರವೀಣ್, ಅಭಿಜಿತ್, ಸಂಪತ್, ಸಂತೋಷ್, ಕುಮಾರ್, ಅಜಿತ್,ನವೀನ್ ಮಲ್ಲಡ್ಕ,ದಿನೇಶ್ ಮುಂತಾದವರು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಲಾಯಲ ವಲಯ ಸಂಚಾಲಕರಾದ ಚಂದ್ರಶೇಖರ ಪರಾರಿ ಇಂದಬೆಟ್ಟು ಸಂಯೋಜಿಸಿದ್ದರು.

LEAVE A REPLY

Please enter your comment!
Please enter your name here