






ಕಕ್ಕಿಂಜೆ: ಚಿಬಿದ್ರೆ ಗ್ರಾಮದ ನಿವಾಸಿ ಲೀಲಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.23 ರಂದು ನಡೆಯಿತು. ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.



ಇವರು ಚಿಬಿದ್ರೆಯ ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಪತಿ ಅಶೋಕ್ ಶೆಟ್ಟಿ ಪುತ್ರ ಬ್ಯಾಂಕ್ ಉದ್ಯೋಗಿ ಅವಿನಾಶ್, ಪುತ್ರಿಯನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









